ಬೆಂಗಳೂರು: 12 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ ದಿನಗಣನೆ ಆರಂಭವಾಗಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನ ಎದುರಿಸಲಿದೆ.
ಐಪಿಲ್ನಲ್ಲಿ ಹಲವು ದಾಖಲೆಗಳನ್ನ ಬರೆದಿರುವ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲೇ ಎರಡು ದಾಖಲೆಗಳನ್ನ ಬರೆಯಲು ಸಜ್ಜಾಗಿದ್ದಾರೆ. ಐಪಿಎಲ್ನ 11 ಆವೃತ್ತಿಗಳಲ್ಲಿ ಒಟ್ಟಾರೆ 4,948 ರನ್ ಗಳಿಸಿರುವ ವಿರಾಟ್ 37 ರನ್ ಗಳಿಸಿದ್ರೆ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಸದ್ಯ ಸಿಎಸ್ಕೆ ತಂಡದ ಆಟಗಾರ ಸುರೇಶ್ ರೈನಾ 4,985 ರನ್ ಗಳಿಸಿ ಅಗ್ರ ಸ್ಥಾನದಲ್ಲಿದ್ದಾರೆ.