ಕೋಲ್ಕತಾ:ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ಬಾಂಗ್ಲಾ ಬೌಲರ್ಗಳನ್ನ ಸಮರ್ಥವಾಗಿ ಎದುರಿಸಿದ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ 27ನೇ ಶತಕ ದಾಖಲಿಸಿದ್ರು. ಈ ಮೂಲಕ ಅಹರ್ನಿಶಿ ಟೆಸ್ಟ್ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಈವರೆಗೆ ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 70 ಶತಕ ಸಿಡಿಸಿದ್ದು ಅತಿಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ 71ನೇ ಶತಕ ಸಿಸಡಿಸಿದ್ದು, 2ನೇ ಸ್ಥಾನದಲ್ಲಿದ್ದಾರೆ. 100 ಶತಕ ಸಿಡಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.
ಇದಕ್ಕೂ ಮುನ್ನ ಮೊದಲ ದಿನದಾಟದಲ್ಲಿ 32 ರನ್ ಗಳಿಸುವ ಮೂಲಕ ಟೆಸ್ಟ್ನಲ್ಲಿ 5000 ರನ್ ಪೂರೈಸಿದ ಭಾರತ ತಂಡದ ಮೊದಲ ನಾಯಕ ಎಂಬ ದಾಖಲೆಯನ್ನ ವಿರಾಟ್ ಬರೆದಿದ್ದರು.