ಬ್ರಿಸ್ಬೇನ್:ಬಾರ್ಡರ್-ಗಾವಸ್ಕರ್ ಸರಣಿಯ 4ನೇ ಟೆಸ್ಟ್ನಲ್ಲಿ ಭಾರತ ತಂಡ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿ ಅರ್ಧಶತಕ ಸಿಡಿಸಿದ ವಾಷಿಂಗ್ಟನ್ ಸುಂದರ್ ಆಟವನ್ನು ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ.
ಆಸೀಸ್ ಭದ್ರಕೋಟೆ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಕೊನೆಯ ಪಂದ್ಯದ ವೇಳೆ ಭಾರತ ತಂಡ 186 ರನ್ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಬ್ಯಾಟಿಂಗ್ ಬಂದ ವಾಷಿಂಗ್ಟನ್ ಸುಂದರ್ ಮತ್ತು ಶಾರ್ದುಲ್ ಠಾಕೂರ್ 123 ರನ್ಗಳ ಜೊತೆಯಾಟ ನಡೆಸಿದರು.
ಶಾರ್ದುಲ್ 115 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 67 ರನ್ ಸಿಡಿಸಿದರೆ, ವಾಷಿಂಗ್ಟನ್ ಸುಂದರ್ 144 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 7 ಬೌಂಡರಿ ಸಹಿತ 62 ರನ್ಗಳಿಸಿದರು.