ನವದೆಹಲಿ:ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ಘಟನೆ ಬಗ್ಗೆ ಕೇಳಲಿಕ್ಕೆ ಭಯವೆನಿಸುತ್ತದೆ. ನಮ್ಮ ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳೋಣ. ಇಂತಹ ಹೇಯ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಗರ್ಭಿಣಿ ಆನೆಗೆ ಪಟಾಕಿ ತುಂಬಿದ್ದ ಅನಾನಸ್ ನೀಡಿದ ಕಿಡಿಗೇಡಿಗಳು..ನೀರಿನಲ್ಲೇ ದಾರುಣ ಸಾವು!
"ನಾವು ಅನಾಗರಿಕರು, ನಾವೇನನ್ನೂ ಕಲಿಯುತ್ತಿಲ್ಲವೇ? ಕೇರಳದಲ್ಲಿ ಆನೆಗಾದ ಸ್ಥಿತಿ ಹೃದಯ ವಿದ್ರಾವಕ ಘಟನೆಯಾಗಿದೆ. ಯಾವ ಪ್ರಾಣಿಯನ್ನೂ ಕ್ರೂರವಾಗಿ ಹಿಂಸಿಸುವುದು ಸೂಕ್ತವಲ್ಲ" ಎಂದು ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮೇ 27 ರಂದು ಕೇರಳದ ಮಲಪ್ಪುರಂನಲ್ಲಿ ನಡೆದಿತ್ತು.