ಮುಂಬೈ:ಐಸಿಸಿ ಏಕದಿನ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ ಸೋಲು ಕಾಣುತ್ತಿದ್ದಂತೆ ನಿಗದಿತ ಓವರ್ಗಳ ನಾಯಕತ್ವದಿಂದ ವಿರಾಟ್ ಕೊಹ್ಲಿಗೆ ಕೊಕ್ ನೀಡಲಾಗುತ್ತದೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ, ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ತಂಡವನ್ನ ಅವರೇ ಮುನ್ನಡೆಸಲಿದ್ದಾರೆ.
ಆಗಸ್ಟ್ 3 ರಿಂದ ಸೆಪ್ಟೆಂಬರ್ 3ರವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಮೂರು ಟಿ-20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದ್ದು, ಅದರಲ್ಲಿ ಟೀಂ ಇಂಡಿಯಾ ತಂಡವನ್ನ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಎಲ್ಲ ಪಂದ್ಯಗಳಲ್ಲೂ ಭಾಗಿಯಾಗಲು ನಿರ್ಧರಿಸಿದ್ದಾರೆ.
ವಿಶ್ವಕಪ್ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ, ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಾಣುತ್ತಿದ್ದಂತೆ ವಿರಾಟ್ ಕೊಹ್ಲಿ ನಿರಾಸೆಗೊಳಗಾಗಿದ್ದರು. ಜತೆಗೆ ವೆಸ್ಟ್ ಇಂಡೀಸ್ ಸರಣಿಯಿಂದ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ, ಇದೀಗ ಅವರು ತಂಡವನ್ನ ಮುನ್ನಡೆಸಲಿದ್ದಾರೆ.
ಕಳೆದ ಕೆಲ ವರ್ಷಗಳಿಂದ ವಿರಾಟ್ ಕೊಹ್ಲಿ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದ ಕಾರಣ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಿ, ರೋಹಿತ್ ಶರ್ಮಾಗೆ ನಾಯಕ ಪಟ್ಟ ನೀಡಲು ಮುಂದಾಗಿತ್ತು. ಆದರೆ ಇದೀಗ ತಂಡದೊಂದಿಗೆ ಪ್ರಯಾಣ ಬೆಳೆಸಲಿರುವ ವಿರಾಟ್ ಕೊಹ್ಲಿ ಮುಂದಿನ ಐಸಿಸಿ ಟಿ-20 ವಿಶ್ವಕಪ್ಗೆ ತಂಡವನ್ನ ತಯಾರು ಮಾಡುವ ಉದ್ದೇಶ ಹೊಂದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಸರಣಿಗಾಗಿ ಜುಲೈ 19ರಂದು ಆಯ್ಕೆ ಸಮಿತಿ ತಂಡ ಪ್ರಕಟ ಮಾಡಲಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಸೈನ್ಯವೇ ಕೆರಿಬಿಯನ್ ನಾಡಿಗೆ ಹೋಗಲಿದೆ.