ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೊಸ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾಗಿಯಾಗಲು ಉತ್ಸುಕರಾಗಿದ್ದು, ಇನ್ಸ್ಟಾಗ್ರಾಂನಲ್ಲಿ ಹೊಸ ಕ್ರಿಕೆಟ್ ಕಿಟ್ನ ಫೋಟೋ ಹಂಚಿಕೊಂಡಿದ್ದಾರೆ.
13ನೇ ಆವೃತ್ತಿ ಐಪಿಎಲ್ಗೆ ಸಜ್ಜು: ಹೊಸ ಕ್ರಿಕೆಟ್ ಕಿಟ್ ಫೋಟೋ ಶೇರ್ ಮಾಡಿದ ಕೊಹ್ಲಿ - ಐಪಿಎಲ್
13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲು ದಿನಗಣನೆ ಆರಂಭವಾಗಿದ್ದು, ಎಲ್ಲ ಫ್ರಾಂಚೈಸಿಗಳ ಪ್ಲೇಯರ್ಸ್ ಟೂರ್ನಿಯಲ್ಲಿ ಭಾಗಿಯಾಗಲು ಬಿರುಸಿನ ತಯಾರಿಯಲ್ಲಿ ತೊಡಗಿದ್ದಾರೆ.
ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದೆ. 51 ದಿನಗಳ ಕಾಲ 60 ಪಂದ್ಯಗಳು ನಡೆಯಲಿವೆ. ಕಳೆದ ಎಲ್ಲ ಆವೃತ್ತಿಗಳಲ್ಲೂ ಉತ್ತಮ ಪ್ರದರ್ಶನ ನೀಡಿರುವ ಹೊರತಾಗಿಯೂ ಕೂಡ ಆರ್ಸಿಬಿ ತಂಡ ಇಲ್ಲಿಯವರೆಗೂ ಟ್ರೋಫಿಗೆ ಮುತ್ತಿಕ್ಕಿಲ್ಲ. ಹೀಗಾಗಿ ಈ ಸಲ ವಿದೇಶದಲ್ಲಿ ಟೂರ್ನಿ ನಡೆಯುತ್ತಿರುವ ಕಾರಣ ಹೊಸ ಹುರುಪಿನೊಂದಿಗೆ ತಂಡ ಮೈದಾನಕ್ಕಿಳಿಯಲಿದೆ.
ವಿರಾಟ್ ಕೊಹ್ಲಿ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಂ ಪೋಟೋದಲ್ಲಿ ಹೊಸ ಬ್ಯಾಟಿಂಗ್ ಪ್ಯಾಡ್ ಹಾಗೂ ಐದು ಬ್ಯಾಟ್ಗಳಿವೆ. ಇಂಡಿಯನ್ ಪ್ರೀಮಿಯರ್ ಲೀಗ್ನ ವೇಳಾಪಟ್ಟಿಗೆ ಸಂಬಂಧಿಸಿದಂತೆ ನಾಳೆ ಬಿಸಿಸಿಐ ಆಡಳಿತ ಮಂಡಳಿ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳಲಿದೆ.