ತಿರುವನಂತಪುರಂ:ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು, ಮೂರು ಟಿ-20 ಪಂದ್ಯಗಳ ಸರಣಿಯಲ್ಲಿ ಇದೀಗ ಉಭಯ ತಂಡ 1-1 ಅಂತರದಲ್ಲಿ ಸಮಬಲ ಸಾಧಿಸಿವೆ.
ಆದರೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಬಂದ ಶಿಮ್ರಾನ್ ಹೆಟ್ಮಾಯರ್ ಸಿಕ್ಸರ್ ಲೈನ್ನತ್ತ ಬಾರಿಸಿದ್ದ ಚೆಂಡನ್ನು ವಿರಾಟ್ ಕೊಹ್ಲಿ ಅದ್ಭುತವಾಗಿ ಕ್ಯಾಚ್ ಪಡೆದುಕೊಳ್ಳುವ ಮೂಲಕ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.