ಮುಂಬೈ:ಮುಂದಿನ ತಿಂಗಳು ಬಾಂಗ್ಲಾ ವಿರುದ್ಧ ಆರಂಭಗೊಳ್ಳಲಿರುವ ಮೂರು ಟಿ-20 ಪಂದ್ಯಗಳ ಸರಣಿಯಿಂದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೊರಗುಳಿಯುವ ಸಾಧ್ಯತೆ ದಟ್ಟವಾಗಿ ಕಂಡು ಬರುತ್ತಿವೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಈಗಾಗಲೇ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯಿಂದ ವಿಶ್ರಾಂತಿ ಪಡೆದುಕೊಳ್ಳಬೇಕಾಗಿತ್ತು. ಆದರೆ ಈ ಸರಣಿಯಲ್ಲಿ ಭಾಗಿಯಾಗಿರುವ ಕಾರಣ, ಮುಂದಿನ ಬಾಂಗ್ಲಾ ವಿರುದ್ಧದ ಚುಟುಕು ಕ್ರಿಕೆಟ್ನಿಂದ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.