ಇಂದೋರ್ (ಮಧ್ಯಪ್ರದೇಶ):ಇಲ್ಲಿನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯ ಪ್ರಾರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸ್ಪಿನ್ನರ್ ಹರ್ಭಜನ್ ಸಿಂಗ್ ಅವರ ಬೌಲಿಂಗ್ನಂತೆ ನಕಲಿ ಬೌಲಿಂಗ್ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಪಂದ್ಯ ಆರಂಭಕ್ಕೂ ಮೊದಲು ಕೊಹ್ಲಿ ಅಭ್ಯಾಸ ನಡೆಸುತ್ತಿದ್ದ ಸಮಯದಲ್ಲಿ ಕೊಹ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂತು. 39 ಸೆಕೆಂಡ್ಗಳಿರುವ ಈ ವಿಡಿಯೋ ನೋಡಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.