ಮೆಲ್ಬೋರ್ನ್:ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮೂರನೇ ಟೆಸ್ಟ್ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ ಎಂದು ಆಸೀಸ್ ಕೋಚ್ ಸುಳಿವು ನೀಡಿದ್ದಾರೆ.
ಗಾಯದ ಕಾರಣದಿಂದಾಗಿ ವಾರ್ನರ್ ಟಿ-20 ಸರಣಿ ಮತ್ತು ಭಾರತ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅವರ ಗಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೋಚ್, ಅವರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ವಾರ್ನರ್ ತೊಡೆಸಂದು ನೋವಿನಿಂದ ಬಳಲುತ್ತಿದ್ದಾರೆ. ಮುಂದಿನ ಟೆಸ್ಟ್ ಪಂದ್ಯಕ್ಕೆ ಇನ್ನೂ ಸಮಯವಿದೆ, ಹಾಗಾಗಿ ಕಾದು ನೋಡಬೇಕು ಎಂದು ಲ್ಯಾಂಗರ್ ಹೇಳಿದ್ದಾರೆ.