ಸಿಡ್ನಿ: ಬಹು ನಿರೀಕ್ಷಿತ ಭಾರತ-ಆಸೀಸ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯ ವಂಚಿತ ಡೆವಿಡ್ ವಾರ್ನರ್ ಮುಂಬರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ತೊಡೆಸಂದು ಗಾಯಕ್ಕೆ ತುತ್ತಾಗಿದ್ದ ವಾರ್ನರ್, ಕ್ಯಾನ್‌ಬೆರಾದಲ್ಲಿ ನಡೆದ ಮೂರನೇ ಏಕದಿನ ಪಂದ್ಯ, ಮೂರು ಪಂದ್ಯಗಳ ಟಿ-20 ಸರಣಿ ಮತ್ತು ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆರಂಭಿಕ ಟೆಸ್ಟ್‌ನಿಂದ ಹೊರಗುಳಿದಿದ್ದರು.
"ನಾನು ಎಂದಿಗೂ ಟೆಸ್ಟ್ ಪಂದ್ಯವನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಗಾಯದ ಕಾರಣದಿಂದ ಮೊದಲ ಟೆಸ್ಟ್ ಪಂದ್ಯ ತಪ್ಪಿಸಿಕೊಂಡಿದ್ದೇನೆ. ಅದರ ಬಗ್ಗೆ ತುಂಬಾ ನಿರಾಶೆಯಾಗಿದ್ದೇನೆ" ಎಂದು ವಾರ್ನರ್ ಹೇಳಿದ್ದಾರೆ.