ಅಡಿಲೇಡ್: ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ 134 ರನ್ಗಳ ಭರ್ಜರಿ ವಿಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಅಬ್ಬರದ ಬ್ಯಾಟಿಂಗ್ ನಡೆಸಿ ಶ್ರೀಲಂಕಾ ಬೌಲಿಂಗ್ ದಾಳಿಯನ್ನು ಧ್ವಂಸ ಮಾಡಿದೆ. ಆರಂಭಿಕರಾಗಿ ಕಣಕ್ಕಿಳಿದ ವಾರ್ನರ್ 4 ಸಿಕ್ಸರ್ 10 ಬೌಂಡರಿ ಸಹಿತ 100 ರನ್ ಗಳಿಸಿದರು. ಇವರಿಗೆ ಸಾಥ್ ನೀಡಿದ ಆ್ಯರೋನ್ ಫಿಂಚ್ 36 ಎಸೆತಗಳಲ್ಲಿ 64, ಮ್ಯಾಕ್ಸ್ವೆಲ್ 28 ಎಸೆತಗಳಲ್ಲಿ 62 ರನ್ ಸಿಡಿಸಿ 233 ರನ್ಗಳ ಬೃಹತ್ ಮೊತ್ತಕ್ಕೆ ಕಾರಣರಾದರು.