ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ವಾಸೀಂ ಜಾಫರ್ ಎಲ್ಲಾ ಮಾದರಿ ಕ್ರಿಕೆಟ್ಗೆ ಗುಡ್‌ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಭಾರತ ತಂಡವನ್ನು ಪ್ರತಿನಿಧಿಸಬೇಕೆಂಬುದು ನನ್ನ ತಂದೆ ಕಂಡಿದ್ದ ಕನಸಾಗಿತ್ತು. ಈ ಕನಸು ನನಸು ಮಾಡಿರುವ ಖುಷಿ ನನಗಿದೆ ಎಂದಿದ್ದಾರೆ.
42 ವರ್ಷದ ವಾಸೀಂ ಜಾಫರ್, ಟೀಂ ಇಂಡಿಯಾ ಪರ 31 ಟೆಸ್ಟ್ ಪಂದ್ಯಗಳನ್ನಾಡಿದ್ದು ಈ ಮೂಲಕ 1,944 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 5 ಶತಕ ಹಾಗೂ 11 ಅರ್ಧಶತಕ ಸೇರಿದೆ. ವೆಸ್ಟ್ ಇಂಡೀಸ್ ವಿರುದ್ಧ ಸಿಡಿಸಿರುವ 212 ರನ್ ಇವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ. 2006ರಲ್ಲಿ ಭಾರತ ಪರ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದ ಈ ಆಟಗಾರ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಿದ್ದರು.