ಅಹಮದಾಬಾದ್ (ಗುಜರಾತ್): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಪ್ರಾರಂಭವಾಗುವ 4ನೇ ಟೆಸ್ಟ್ ಪಂದ್ಯಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.
ಕೊಹ್ಲಿ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 42 ಸೆಕೆಂಡುಗಳ ವಿಡಿಯೋದಲ್ಲಿ, ಭರ್ಜರಿ ತಯಾರಿ ನಡೆಸುತ್ತಿರುವುದು ಕಂಡು ಬಂದಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಪಿಚ್ ಕುರಿತ ಚರ್ಚೆಯು ಪ್ರಮುಖ ಪಾತ್ರ ಪಡೆದುಕೊಂಡಿದ್ದರೆ, ಕೊಹ್ಲಿ ಬಾಯ್ಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಟ್ಟ ಪಡೆಯಲು ಹವಣಿಸುತ್ತಿದೆ.