ಹೈದರಾಬಾದ್: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿ. ಇನ್ನು ಇವರು ನ್ಯೂಜಿಲ್ಯಾಂಡ್ ವಿರುದ್ಧದ ಟಿ 20 ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ 70 ರನ್ ಗಳಿಸಿ ಮತ್ತೆ ಮಿಂಚಿದ್ದಾರೆ. ಇನ್ನು ಮ್ಯಾಕ್ಸ್‌ವೆಲ್ ಬಾರಿಸಿದ ಚೆಂಡು ಸ್ಟೇಡಿಯಂನಲ್ಲಿದ್ದ ಕುರ್ಚಿಗೆ ತಗುಲಿದ್ದು, ಅದು ಮುರಿದಿದೆ.
ಮ್ಯಾಕ್ಸ್‌ವೆಲ್ ಎಂಟು ಬೌಂಡರಿ ಮತ್ತು ಐದು ಸಿಕ್ಸರ್‌ಗಳನ್ನು ಬಾರಿಸಿ 70 ರನ್ ಗಳಿಸಿದ್ದರು. ನ್ಯೂಜಿಲ್ಯಾಂಡ್ನ ಆಲ್‌ರೌಂಡರ್ ಜಿಮ್ಮಿ ನೀಶಮ್ ಎಸೆತದ 16ನೇ ಓವರ್‌ನ ಎರಡನೇ ಎಸೆತದಲ್ಲಿ ಮ್ಯಾಕ್ಸ್‌ವೆಲ್ ಬೃಹತ್ ಸಿಕ್ಸರ್ ಬಾರಿಸಿದ್ದಾರೆ. ಆ ಚೆಂಡು ಸ್ಟ್ಯಾಂಡ್‌ನಲ್ಲಿದ್ದ ಕುರ್ಚಿ ಮುರಿಯಲು ಕಾರಣವಾಗಿದೆ.