ನವದೆಹಲಿ: ವಿಶ್ವಕಪ್ ಸೆಮಿಫೈನಲ್ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೋಲು ಕಂಡು ಹೊರಬಿದ್ದು, ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಕ್ರಿಕೆಟ್ ಸರಣಿಗೆ ಸಜ್ಜಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಪ್ಲೇಯರ್ ಗವಾಸ್ಕರ್ ಬಿಸಿಸಿಐ ಪ್ರಶ್ನೆ ಮಾಡಿದ್ದಾರೆ.
ಟೀಂ ಇಂಡಿಯಾ ಕ್ಯಾಪ್ಟನ್ ಆಗಿ ಕೊಹ್ಲಿ ವಿಶ್ವಕಪ್ನಲ್ಲಿ ಯಾವ ಪಾತ್ರ ನಿರ್ವಹಿಸಿದ್ದಾರೆ?. ಇದೀಗ ಅವರು ತಂಡದ ಕ್ಯಾಪ್ಟನ್ ಆಗಿ ಮುಂದುವರಿಯಲು ಅರ್ಹರೇ ಎಂಬ ಪ್ರಶ್ನೆಯನ್ನ ಬಿಸಿಸಿಐ ಎದುರಿಟ್ಟಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅವರನ್ನ ಕ್ಯಾಪ್ಟನ್ ಆಗಿ ಮುಂದುವರಿಸಿರುವುದು ಏಕೆ ಎಂದು ಇಂಗ್ಲೆಂಡ್ ಡೈಲಿಯಲ್ಲಿ ಬರೆದಿದ್ದಾರೆ. ಜತೆಗೆ ವಿಶ್ವಕಪ್ನಲ್ಲಿ ಒಂದು ತಂಡದ ಕ್ಯಾಪ್ಟನ್ ಆಗಿ ಕೊಹ್ಲಿ ಯಾವ ಪಾತ್ರ ನಿರ್ವಹಿಸಿದ್ದಾರೆ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ.