ನವದೆಹಲಿ: ಭಾರತ ಕ್ರಿಕೆಟ್ನ ಮಾಜಿ ಆಟಗಾರ ಬಿಷನ್ ಸಿಂಗ್ ಬೇಡಿಯನ್ನು ಡಿಡಿಸಿಎನ 'ಭೀಷ್ಮ ಪಿತಾಮಹ' ಎಂದು ಕರೆದಿರುವ ಡೆಲ್ಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರೋಹನ್ ಜೇಟ್ಲಿ, ಬೇಡಿ ಫಿರೋಜ್ ಕೋಟ್ಲಾ ಮೈದಾನದಿಂದ ತಮ್ಮ ಹೆಸರನ್ನು ತೆಗೆದುಹಾಕಲು ಸಲ್ಲಿಸಿರುವ ಮನವಿಯನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಳ್ಳುತ್ತೇವೆ ಎಂದಿದ್ದಾರೆ.
ಫಿರೋಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕ್ರಿಕೆಟಿಗನ ಬದಲು ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿದವರ(ಅರುಣ್ ಜೇಟ್ಲಿ) ಪ್ರತಿಮೆಯನ್ನು ನಿರ್ಮಿಸುವ ನಿರ್ಧಾರ ಕೈಗೊಂಡಿದೆ ಎಂಬ ಕಾರಣಕ್ಕೆ ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಸನ್ ವಿರುದ್ಧ ಬಹಿರಂಗವಾಗಿ ಟೀಕಿಸಿದ್ದಲ್ಲದೆ, ಕೋಟ್ಲಾ ಸ್ಟೇಡಿಯಂನ ಸ್ಟ್ಯಾಂಡ್ನಿಂದ ತಮ್ಮ ಹೆಸರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದರು.
ಇತ್ತೀಚೆಗೆ ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೇ ಅಲಂಕರಿಸಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್ ಜೇಟ್ಲಿ, ಈ ವಿಷಯದ ಬಗ್ಗೆ ಬೇಡಿ ಅವರೊಂದಿಗೆ ವೈಯಕ್ತಿಕವಾಗಿ ಕುಳಿತು ಮಾತನಾಡುವೆ. ಆದರೆ ಅವರು ತಮ್ಮ ತಂದೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಹೇಳಿದ್ದಾರೆ. ಆದಾಗ್ಯೂ ಡಿಡಿಸಿಎ ಸೋಮವಾರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಅರುಣ್ ಜೇಟ್ಲಿ ಪ್ರತಿಮೆಯನ್ನು ಅನಾವರಣ ಮಾಡಿದೆ.