ಗಯಾನ:ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಇಂದು ವಿಂಡೀಸ್ ವಿರುದ್ಧ ಗಯಾನದಲ್ಲಿ ಮೊದಲ ಏಕದಿನ ಪಂದ್ಯ ಆಡಲಿದೆ.
ವಿಂಡೀಸ್ ಪ್ರವಾಸದಲ್ಲಿರುವ ಭಾರತ ತಂಡ 3 ಪಂದ್ಯಗಳ ಟಿ-20 ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿದ್ದು, ಇಂದಿನಿಂದ 3 ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಲಿದೆ. ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿರುವ ಟೀಂ ಇಂಡಿಯಾ ಆಟಗಾರರು, ಏಕದಿನ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರುವ ಉತ್ಸಾಹದಲ್ಲಿದ್ದಾರೆ.
ಹಾಗೆಯೇ ಟಿ-20 ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ವಿಂಡೀಸ್ ಆಟಗಾರರು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಚುಟುಕು ಪಂದ್ಯಗಳಲ್ಲಿ ಕಾಣಿಸಿಕೊಳ್ಳದ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಏಕದಿನ ಟೂರ್ನಿಯಲ್ಲಿ ಸ್ಥಾನ ಪಡೆದಿದ್ದು, ವಿಂಡೀಸ್ ತಂಡದ ಬಲ ಹೆಚ್ಚಿಸಿದೆ.