ಕೋಲ್ಕತ್ತಾ:ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ ಟಿ-20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಾಣುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕುವ ಟೀಂ ಇಂಡಿಯಾ ಕನಸು ಭಗ್ನಗೊಂಡಿದೆ.
ಸೋತು ನಿರಾಸೆಯಲ್ಲಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮಹಿಳಾ ತಂಡಕ್ಕೆ ಇದೀಗ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಅನೇಕರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಟ್ವಿಟ್
ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ನಿಮ್ಮ ಪ್ರಯತ್ನ ಎಲ್ಲರೂ ಹೆಮ್ಮೆ ಪಡುವಂತಹದ್ದು. ಮುಂದಿನ ದಿನಗಳಲ್ಲಿ ನೀವು ಖಂಡಿತವಾಗಿ ಪುಟಿದ್ದೇಳುತ್ತೀರಿ ಎಂಬ ವಿಶ್ವಾಸ ನನ್ನಲ್ಲಿದೆ ಎಂದಿದ್ದಾರೆ.
ಸೌರವ್ ಗಂಗೂಲಿ