ಬ್ರಿಸ್ಬೆನ್: ಐಸಿಸಿ ಮಹಿಳಾ ವಿಶ್ವಕಪ್ ಟಿ-20 ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯವು ಮಳೆಗೆ ಆಹುತಿಯಾಗಿದೆ.
ಮಹಿಳಾ ವಿಶ್ವಕಪ್ ಟಿ-20: ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಆಹುತಿ - ಐಸಿಸಿ ಮಹಿಳಾ ವಿಶ್ವಕಪ್ ಟಿ-20
ಐಸಿಸಿ ಮಹಿಳಾ ವಿಶ್ವಕಪ್ ಟಿ-20 ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ.
![ಮಹಿಳಾ ವಿಶ್ವಕಪ್ ಟಿ-20: ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಆಹುತಿ Women's T20 World Cup warm-up](https://etvbharatimages.akamaized.net/etvbharat/prod-images/768-512-6090652-thumbnail-3x2-modi.jpg)
ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಆಹುತಿ
ಕಾಂಗರೂ ನಾಡಿನಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಟಿ-20 ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಇಂದು ಬ್ರಿಸ್ಬೆನ್ನ ಆ್ಯಲನ್ ಬಾರ್ಡರ್ ಮೈದಾನದಲ್ಲಿ ಟೀಂ ಇಂಡಿಯಾ ಹಾಗೂ ಪಾಕ್ ನಡುವೆ ಅಭ್ಯಾಸ ಪಂದ್ಯವಿತ್ತು. ಆದರೆ ಮಳೆಯಿಂದ ಮೈದಾನವು ತೇವವಾಗಿದ್ದ ಹಿನ್ನೆಲೆಯಲ್ಲಿ ಪಂದ್ಯ ರದ್ದುಗೊಂಡಿದೆ.
ಟೂರ್ನಿಯು ಫೆ.21ರಿಂದ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಸಿಡ್ನಿಯಲ್ಲಿ ಮುಖಾಮುಖಿಯಾಗಲಿವೆ. ಮಾರ್ಚ್ 8ರಂದು ಮೆಲ್ಬೋರ್ನ್ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.