ಸೌತಾಂಪ್ಟನ್: ಕ್ರಿಕೆಟ್ ಶಿಶು ಅಫ್ಘಾನಿಸ್ತಾನದ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಧೋನಿಯನ್ನು ತಂಡದಿಂದ ಕೈಬಿಟ್ಟು ಯುವ ಆಟಗಾರ ರಿಷಭ್ ಪಂತ್ಗೆ ಅವಕಾಶ ನೀಡಿ ಎಂದು ಸಾಮಾಜಿಕ ಜಾಲಾತಾಣಗಳಲ್ಲಿ ಧೋನಿ ವಿರುದ್ಧ ಭಾರತೀಯ ಅಭಿಮಾನಿಗಳು ಕಿಡಿ ಕಾರಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ಬ್ಯಾಟ್ಸ್‌ಮನ್ ಆಗಿರುವ ಧೋನಿ 52 ಎಸೆತಗಳನ್ನು ಎದುರಿಸಿ 3 ಬೌಂಡರಿಗಳಿಂದ ಕೇವಲ 28 ರನ್ ಗಳಿಸಿದ್ದರು. ಪಂದ್ಯದ ನಿರ್ಣಾಯಕ ಹಂತದಲ್ಲಿ ಅವರು ವಿಕೆಟ್ ಒಪ್ಪಿಸಿದ್ದು, ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿದೆ. ಹೀಗಾಗಿ ಧೋನಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.