ಲಂಡನ್:ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡು ಹೊರಬಿದ್ದಿದ್ದ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಫಿಟ್ ಆಗಿದ್ದು, ತಂಡ ಹಾಗೂ ಕ್ರೀಡಾಭಿಮಾನಿಗಳಿಗೆ ಸಂತಸ ನೀಡಿದೆ.
ಟೀಂ ಇಂಡಿಯಾಗೆ ಗುಡ್ ನ್ಯೂಸ್: ವೇಗಿ ಭುವನೇಶ್ವರ್ ಕುಮಾರ್ ಫಿಟ್!
ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ನಿಂದ ಹೊರ ಬರುತ್ತಿದ್ದಂತೆ ತಂಡಕ್ಕೆ ಮತ್ತೊಂದು ಅಘಾತ ಎದುರಾಗಿತ್ತು. ವೇಗಿ ಭುವಿ ಕೂಡ ಗಾಯಗೊಂಡಿದ್ದರು. ಆದರೆ, ಇದೀಗ ಅವರು ಫಿಟ್ ಆಗಿದ್ದು, ತಂಡಕ್ಕೆ ಮತ್ತಷ್ಟು ಶಕ್ತಿ ಬಂದಿದೆ.
ಭುವಿ ಗಾಯಗೊಳ್ಳುತ್ತಿದ್ದಂತೆ ಅವರು ಅಫ್ಘಾನ್ ವಿರುದ್ಧದ ಪಂದ್ಯ ಸೇರಿದಂತೆ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಅವರು ಫಿಟ್ ಆಗಿರೋದು ತಂಡಕ್ಕೆ ಮತ್ತಷ್ಟು ಶಕ್ತಿ ಬಂದಿದೆ. ಭುವನೇಶ್ವರ್ ಕುಮಾರ್ ಬೌಲಿಂಗ್ ಮಾಡುತ್ತಿದ್ದ ವೇಳೆ ತಂಡದ ಪಿಸಿಯೋ ಕೂಡ ಅವರ ಜೊತೆಗಿದ್ದರು.
ಭುವನೇಶ್ವರ್ ಕುಮಾರ್ ಇದೀಗ ನೆಟ್ನಲ್ಲಿ ಬೌಲಿಂಗ್ ಅಭ್ಯಾಸ ಮಾಡುತ್ತಿರುವ ವಿಡಿಯೋ ತುಣುಕವೊಂದನ್ನ ಬಿಸಿಸಿಐ ತನ್ನ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭುವಿ ಜಾಗಕ್ಕೆ ಭರ್ತಿ ಪಡೆದು ಕಣಕ್ಕಿಳಿದಿದ್ದ ಮೊಹಮ್ಮದ್ ಶಮಿ ಹ್ಯಾಟ್ರಿಕ್ ವಿಕೆಟ್ ಪಡೆದುಕೊಂಡು ಮಿಂಚಿದ್ದರು. ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೂ ಭುವಿಗೆ ಮತ್ತಷ್ಟು ವಿಶ್ರಾಂತಿ ನೀಡಿ, ಶಮಿ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ.