ಕರ್ನಾಟಕ

karnataka

ETV Bharat / sports

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನಲ್ಲಿ ನಂ.1 ಸ್ಥಾನಕ್ಕೇರಿದ ಭಾರತ... ರೇಸ್​​ನಿಂದ ಹೊರಬಿದ್ದ ಇಂಗ್ಲೆಂಡ್​! - ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನಲ್ಲಿ ನಂ.1 ಸ್ಥಾನ

ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​​ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೆಣಸಾಟ ನಡೆಸಬೇಕಾದ್ರೆ ಟೀಂ ಇಂಡಿಯಾಗೆ ಮುಂದಿನ ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ಎದುರಾಗಿದೆ.

World Test Championship
World Test Championship

By

Published : Feb 25, 2021, 9:02 PM IST

ಅಹಮದಾಬಾದ್​(ಗುಜರಾತ್​): ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​ಗಳ ಗೆಲುವು ದಾಖಲು ಮಾಡುವ ಮೂಲಕ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ನಂಬರ್​ 1 ಸ್ಥಾನಕ್ಕೆ ಲಗ್ಗೆ ಹಾಕಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನ 112 ರನ್​ಗಳಿಗೆ ಆಲೌಟ್ ಮಾಡಿದ್ದ ಭಾರತ 145 ರನ್​ಗಳಿಸಿತು. ಎರಡನೇ ಇನ್ನಿಂಗ್ಸ್​​ನಲ್ಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆಂಗ್ಲರ ಪಡೆ 81 ರನ್​ಗಳಿಗೆ ಕುಸಿತ ಕಂಡಿದ್ದರಿಂದ ಟೀಂ ಇಂಡಿಯಾ ಗೆಲುವಿಗೆ ಕೇವಲ 49 ರನ್​ಗಳ ಗುರಿ ಪಡೆದುಕೊಂಡಿತ್ತು. ಈ ಗುರಿಯನ್ನ ಯಾವುದೇ ವಿಕೆಟ್​ ನಷ್ಟವಿಲ್ಲದೇ ಮುಟ್ಟಿತು.

ನಂ.1 ಸ್ಥಾನಕ್ಕೇರಿದ ಟೀಂ ಇಂಡಿಯಾ

ಮೂರನೇ ಟೆಸ್ಟ್​ ಪಂದ್ಯದಲ್ಲಿ ಗೆಲುವು ದಾಖಲು ಮಾಡುವ ಮೂಲಕ ಟೀಂ ಇಂಡಿಯಾ 2-1 ಅಂತರದ ಮುನ್ನಡೆ ಪಡೆದುಕೊಂಡಿದ್ದು, ಈ ಮೂಲಕ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ನಂಬರ್​ 1 ಸ್ಥಾನಕ್ಕೇರಿದೆ. ಇದೀಗ ಚಾಂಪಿಯನ್​ಶಿಪ್​ನ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಭಾರತ ಸೆಣಸಾಟ ನಡೆಸಬೇಕಾದ್ರೆ ಮುಂದಿನ ಪಂದ್ಯದಲ್ಲಿ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ನಿಎದುರಾಗಿದೆ. ಒಂದು ವೇಳೆ ಕೊಹ್ಲಿ ಪಡೆ ಪಂದ್ಯ ಕೈಚೆಲ್ಲಿದ್ರೆ ಆಸ್ಟ್ರೇಲಿಯಾ ಅವಕಾಶ ಪಡೆದುಕೊಳ್ಳಲಿದೆ. ಇನ್ನು 64.1 ಪಾಯಿಂಟ್​ ಹೊಂದಿರುವ ಇಂಗ್ಲೆಂಡ್ ರೇಸ್​ನಿಂದ ಹೊರಬಿದ್ದಿದೆ.

ಸದ್ಯ ಟೀಂ ಇಂಡಿಯಾ ಪಾಯಿಂಟ್ ಪಟ್ಟಿಯಲ್ಲಿ 71.0 ಪಾಯಿಂಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ನ್ಯೂಜಿಲ್ಯಾಂಡ್​ 70.0 ಅಂಕಗಳೊಂದಿಗೆ ಎರಡನೇ ಸ್ಥಾನ ಹಾಗೂ 69.2 ಪಾಯಿಂಟ್​​ಗಳೊಂದಿಗೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡರೆ ಆಸ್ಟ್ರೇಲಿಯಾ ನೇರವಾಗಿ ಪ್ರವೇಶ ಪಡೆದುಕೊಂಡು ನ್ಯೂಜಿಲ್ಯಾಂಡ್​ ವಿರುದ್ಧ ಸೆಣಸಾಟ ನಡೆಸಲಿದೆ.

ABOUT THE AUTHOR

...view details