ರಾಯ್ಪುರ್: 2007ರ ಟಿ-20 ವಿಶ್ವಕಪ್ನಲ್ಲಿ ಒಂದೇ ಓವರ್ನಲ್ಲಿ ಆರು ಸಿಕ್ಸರ್ ಸಿಡಿಸಿ ಎಲ್ಲರ ಗಮನ ಸೆಳೆದಿದ್ದ ಯುವರಾಜ್ ಸಿಂಗ್, ಸದ್ಯ ಅದೇ ಫಾರ್ಮ್ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ವಿವಿಧ ದೇಶದ ಕ್ರಿಕೆಟ್ ದಿಗ್ಗಜರೊಂದಿಗೆ ನಡೆಯುತ್ತಿರುವ ರೋಡ್ ಸೇಫ್ಟಿ ಸರಣಿಯಲ್ಲಿ ಮತ್ತೊಮ್ಮೆ ಅಬ್ಬರಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ದಕ್ಷಿಣ ಆಫ್ರಿಕಾ ಲೆಜೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ, ಒಂದೇ ಓವರ್ನಲ್ಲಿ ಸತತ 4 ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್, ಇಂದಿನ ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ್ದಾರೆ.
ಜತೆಗೆ ಪಂದ್ಯ ವೀಕ್ಷಣೆ ಮಾಡಲು ಬಂದಿದ್ದ ಅಭಿಮಾನಿಗಳಿಗೆ ಫುಲ್ ಮನರಂಜನೆ ನೀಡಿದ್ದಾರೆ. ಕೇವಲ 20 ಎಸೆತಗಳಲ್ಲಿ ಅಜೇಯ 49ರನ್ ಸಿಡಿಸಿದ್ದು, ಇದರಲ್ಲಿ 1 ಬೌಂಡರಿ ಹಾಗೂ 6 ಸಿಕ್ಸರ್ ಸೇರಿಕೊಂಡಿವೆ. ವಿಶೇಷವೆಂದರೆ ಒಂದೇ ಓವರ್ನಲ್ಲಿ ನಾಲ್ಕು ಭರ್ಜರಿ ಸಿಕ್ಸರ್ ಸಿಡಿಸಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.
ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಯುವಿ ಆರಂಭದಲ್ಲಿ 9 ಎಸೆತಗಳಲ್ಲಿ 10 ರನ್ಗಳಿಕೆ ಮಾಡಿದ್ರು. ಇದಾದ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದ ಸಿಕ್ಸರ್ ಕಿಂಗ್ ಎದುರಾಳಿ ತಂಡದ ಬೌಲರ್ಗಳ ಮೇಲೆ ಸವಾರಿ ನಡೆಸಿದರು. ಜತೆಗೆ ಕೊನೆಯ 12 ಎಸೆತಗಳಲ್ಲಿ 40ರನ್ಗಳಿಕೆ ಮಾಡಿದ್ರು. ಯುವಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಇಂಡಿಯಾ ಲೆಜೆಂಡ್ ತಂಡ ನಿಗದಿತ 20 ಓವರ್ಗಳಲ್ಲಿ 3ವಿಕೆಟ್ ನಷ್ಟಕ್ಕೆ 218ರನ್ಗಳಿಕೆ ಮಾಡಿದೆ.