ನಾಟಿಂಗ್ಹ್ಯಾಂ: ವಿಂಡೀಸ್ ಕ್ರಿಕೆಟ್ ತಂಡದ ದೈತ್ಯ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಸಿಕ್ಸರ್ ಬಾರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ನಿನ್ನೆಯ ಪಂದ್ಯದಲ್ಲಿ ಗೇಲ್ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡವನ್ನು ಬೇಗನೆ ಜಯದ ಹಾದಿಗೆ ತಂದು ನಿಲ್ಲಿಸಿದರು. ಅರ್ಧ ಶತಕ ಗಳಿಸಿದ ಗೇಲ್, ಮೂರು ಸಿಕ್ಸರ್ ಬಾರಿಸುವ ಮೂಲಕ ವಿಶ್ವಕಪ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಸರದಾರ ಎನ್ನಿಸಿಕೊಂಡರು.