ನವದೆಹಲಿ:ದಕ್ಷಿಣ ಆಫ್ರಿಕಾ ವಿರುದ್ಧದ ಇವತ್ತಿನ ವಿಶ್ವಕಪ್ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಐಸಿಸಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ವಿರಾಟ್ ಕೊಹ್ಲಿ ಫೋಟೋ ಹಲವು ಟ್ವಿಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ರಾಜನಂತೆ ಕಿರೀಟ ತೊಟ್ಟು ಕೈಯಲ್ಲಿ ಬ್ಯಾಟ್ ಮತ್ತು ಬಾಲ್ ಹಿಡಿದು ಸಿಂಹಾಸನದ ಮೇಲೆ ವಿರಾಜಮಾನವಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪೋಟೋವನ್ನ ಐಸಿಸಿ ತನ್ನ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದೆ. ಈ ಒಂದು ಫೋಟೋ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಐಸಿಸಿ ವಿರುದ್ಧ ಆಕ್ರೋಶ ವ್ಯಕ್ಯಪಡಿಸುತ್ತಿದ್ದಾರೆ.