ಲಂಡನ್:ಐಸಿಸಿ ವಿಶ್ವಕಪ್ ಟೂರ್ನಿಯ 35ನೇ ಪಂದ್ಯದಲ್ಲಿ ಇಂದು ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತಿದ್ದು, ಸೆಮೀಸ್ ಆಸೆ ಜೀವಂತವಾಗಿರಿಸಿಕೊಳ್ಳಲು ಶ್ರೀಲಂಕಾ ತಂಡ ಇಂದಿನ ಪಂದ್ಯವನ್ನ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ದಕ್ಷಿಣ ಆಫ್ರಿಕಾ ತಂಡ ಈಗಾಗಲೆ ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದಿದ್ದು, ಇಂದಿನ ಪಂದ್ಯ ಹರಿಣ ಪಡೆಗೆ ಮಹತ್ವದ್ದೇನಲ್ಲ. ಆದರೆ, ಶ್ರೀಲಂಕಾ ತಂಡ ಮಾತ್ರ ಇಂದಿನ ಪಂದ್ಯವನ್ನ ಗೆಲ್ಲಲೇ ಬೇಕಾಗಿದೆ. ಲಂಕನ್ನರು 2 ಪಂದ್ಯದಲ್ಲಿ ಜಯ ಸಾಧಿಸಿದ್ರೆ, ಎರಡು ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡು ಪಂದ್ಯದಲ್ಲಿ ಸೋಲು ಕಂಡಿದೆ. ಒಟ್ಟು 6 ಅಂಕ ಗಳಿಸಿದ್ದು, ಅಂತಿಮ ನಾಲ್ಕರ ಘಟ್ಟ ತಲುಪುವ ಕನಸು ಕಾಣುತ್ತಿದೆ.
ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡ 5 ಬಾರಿ ಮುಖಾಮುಖಿಯಾಗಿವೆ. ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯದಲ್ಲಿ ಜಯಗಳಿಸಿದ್ದರೆ, ಲಂಕಾ ತಂಡ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯ ಡ್ರಾನಲ್ಲಿ ಅಂತ್ಯಕಂಡಿದೆ.