ನವದೆಹಲಿ:ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಆಡುವ ಕೊನೆಯ ಪಂದ್ಯದಲ್ಲಿ ಧೋನಿ ನಿವೃತ್ತಿ ತೆಗೆದುಕೊಳ್ಳುತ್ತಾರೆ ಎನ್ನಲಾಗುತಿತ್ತು. ಆದರೆ, ಇದಕ್ಕೆ ಧೋನಿ ನಕಾರ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಿವೃತ್ತಿ ಬಗ್ಗೆ ಧೋನಿ ಇನ್ನೂ ನಿರ್ಧಾರ ಮಾಡಿಲ್ಲ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ' ನಾನು ಯಾವಾಗ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ನನಗೇ ಗೊತ್ತಿಲ್ಲ. ಆದರೆ ಸಾಕಷ್ಟು ಜನ ನಾನು ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮೊದಲೇ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಬಯಸುತ್ತಿದ್ದಾರೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.