ನವದೆಹಲಿ:ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ಅಕ್ಟೋಬರ್ 24ರಂದು ದುಬೈನಲ್ಲಿ ನಡೆಯಲಿದೆ ಎಂದು ಎಎನ್ಐ ಸುದ್ದಿಸಂಸ್ಥೆಗೆ ಉನ್ನತ ಮೂಲಗಳು ಮಾಹಿತಿ ನೀಡಿವೆ.
ಟಿ20 ವಿಶ್ವಕಪ್ 2021ಕ್ಕೆ ಬಿಸಿಸಿಐ ಆತಿಥ್ಯ ವಹಿಸಲಿದ್ದು, ಪಂದ್ಯಗಳು ಒಮನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ನಡೆಯಲಿವೆ ಎಂದು ಕಳೆದ ತಿಂಗಳು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಣೆ ಮಾಡಿತ್ತು.