ಲಂಡನ್: ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ನಂತರ ದಕ್ಷಿಣ ಆಫ್ರಿಕಾ ತಂಡದ ಸ್ಪಿನ್ನರ್ ಇಮ್ರಾನ್ ತಾಹಿರ್ ಮತ್ತು ಆಲ್ರೌಂಡರ್ ಆಟಗಾರ ಜೆಪಿ ಡುಮಿನಿ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
2011ರಲ್ಲಿ ದಕ್ಷಿಣ ಆಪ್ರಿಕಾ ಪರ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ತಾಹೀರ್ ಇಲ್ಲಿವರೆಗೆ 107 ಏಕದಿನ ಕ್ರಿಕೆಟ್ ಪಂದ್ಯಗಳನ್ನ ಆಡಿದ್ದು, 173 ವಿಕೆಟ್ ಪಡೆದುಕೊಂಡಿದ್ದಾರೆ. ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳಿಂದ 11 ವಿಕೆಟ್ ಪಡೆದುಕೊಂಡಿದ್ದಾರೆ.