ನವದೆಹಲಿ: ಕಾಲ್ಬೆರಳು ಗಾಯಕ್ಕೆ ತುತ್ತಾಗಿದ್ದ ಟೀಂ ಇಂಡಿಯಾ ಆಟಗಾರ ವಿಜಯ್ ಶಂಕರ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ವಿಶ್ವಕಪ್ನಿಂದ ವಿಜಯ್ ಶಂಕರ್ ಔಟ್: ಮತ್ತೊಬ್ಬ ಕನ್ನಡಿಗನಿಗೆ ಸಿಕ್ತು ಚಾನ್ಸ್! - ಮಯಾಂಕ್ ಅಗರ್ವಾಲ
ಕಾಲ್ಬೆರಳು ಗಾಯಕ್ಕೆ ತುತ್ತಾಗಿದ್ದ ವಿಜಯ್ ಶಂಕರ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಅಭ್ಯಾಸದ ವೇಳೆ ಬುಮ್ರಾ ಬೌಲಿಂಗ್ನಲ್ಲಿ ಗಾಯಗೊಂಡಿದ್ದ ವಿಜಯ್ ಶಂಕರ್ ನೋವಿನಿಂದ ಬಳಲುತ್ತಿದ್ದರು. ಸದ್ಯ ಚೇತರಿಕೆ ಕಾಣದ ವಿಜಯ್ ಶಂಕರ್ಗೆ ವೈದ್ಯರು 3 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಆಲ್ರೌಂಡರ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ವಿಜಯ್ ಶಂಕರ್ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ.
ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಆರಂಭಿಕ ಆಟಗಾರ ಶಿಖರ್ ಧವನ್ ಕೂಡ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದರು.