ಲಂಡನ್:ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಹಲವು ದಾಖಲೆಗಳನ್ನ ನಿರ್ಮಾಣ ಮಾಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಐವರು ಆಟಗಾರರ ಕಣ್ಣು ಬಿದ್ದಿದೆ.
ಈಗಾಗಲೆ 2019ರ ವಿಶ್ವಕಪ್ ಟೂರ್ನಿಯಲ್ಲಿ ಹಲವು ನೂತನ ದಾಖಲೆಗಳು ನಿರ್ಮಾಣವಾಗಿದ್ದು, ಕೆಲ ದಿಗ್ಗಜರ ದಾಖಲೆಳು ಬ್ರೇಕ್ ಆಗಿವೆ. ಇದೀಗ 2003ರ ವಿಶ್ವಕಪ್ ಟೂರ್ನಿಯಲ್ಲಿ ಸಚಿನ್ ನಿರ್ಮಾಣ ಮಾಡಿದ್ದ ದಾಖಲೆ ಮೇಲೆ ಐವರು ಆಟಗಾರರ ಕಣ್ಣು ಬಿದ್ದಿದೆ.
2003ರ ವಿಶ್ವಕಪ್ ಟೂರ್ನಿಯಲ್ಲಿ ಸಚಿನ್ 673 ರನ್ ಗಳಿಸಿದ್ದರು. ವಿಶ್ವಕಪ್ ಕ್ರಿಕೆಟ್ ಟೂರ್ನಿಯೊಂದರಲ್ಲೇ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ಸಚಿನ್ ಹೆಸರಿನಲ್ಲಿದೆ. ಪ್ರಸಕ್ತ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಐವರು ಆಟಗಾರರು ಈ ದಾಖಲೆಯನ್ನ ಬ್ರೇಕ್ ಮಾಡುವ ಸೂಚನೆ ನೀಡಿದ್ದಾರೆ.