ಮ್ಯಾಂಚೆಸ್ಟರ್: ಓಲ್ಡ್ ಟ್ರಾಫೋರ್ಡ್ ನಲ್ಲಿ ಇಂದು ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ಆಡಿರುವ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ವೆಸ್ಟ್ ಇಂಡೀಸ್ ತಂಡ ಒಂದು ಗೆಲುವಿಗಾಗಿ ಹಾತೊರೆಯುತಿದ್ದು, ಇಂದು ಟೀಂ ಇಂಡಿಯಾ ಕಟ್ಟಿಹಾಕಲು ಪಣ ತೊಟ್ಟಿದೆ.
ಇದುವರೆಗೂ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡ ವಿಶ್ವಕಪ್ ಟೂರ್ನಿಯಲ್ಲಿ 8 ಬಾರಿ ಮುಖಾಮುಖಿಯಾಗಿವೆ. 5 ಪಂದ್ಯಗಳಲ್ಲಿ ಟೀಂ ಇಂಡಿಯಾ ಜಯ ಗಳಿಸಿದ್ದರೆ, 3 ಬಾರಿ ವೆಸ್ಟ್ ಇಂಡೀಸ್ ಗೆಲುವಿನ ನಗೆ ಬೀರಿದೆ.
ತಂಡಗಳು:
ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ವಿಜಯ್ ಶಂಕರ್, ಕೆ.ಎಲ್. ರಾಹುಲ್, ಕೇದಾರ್ ಜಾಧವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ
ವೆಸ್ಟ್ ಇಂಡೀಸ್: ಕ್ರಿಸ್ ಗೇಲ್, ಶೈ ಹೋಪ್, ಸುನೀಲ್ ಅಂಬ್ರಿಸ್, ಶಿಮ್ರೋನ್ ಹೇಟ್ಮಯರ್, ನಿಕೋಲಸ್ ಪೂರನ್, ಜೇಸನ್ ಹೋಲ್ಡರ್, ಕಾರ್ಲೋಸ್ ಬ್ರಾತ್ವೈಟ್, ಶಾನೊನ್ ಗೇಬ್ರಿಯಲ್, ಶೆಲ್ಡನ್ ಕಾಟ್ರೆಲ್, ಓಶಾನ್ ಥೋಮಸ್, ಫೆಬಿಯನ್ ಅಲೆನ್