ಹೈದರಾಬಾದ್:ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನ ಅಭಿಯಾನ ಮುಂದುವರೆಸಿರುವ ಟೀಂ ಇಂಡಿಯಾ ಸೆಮಿಫೈನಲ್ ಹಂತ ತಲುಪಿದ್ದು, ಈ ನಡುವೆ ಭಾರತ ತಂಡಕ್ಕೆ ಪಾಕಿಸ್ತಾನ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಶುಭ ಕೋರಿದ್ದಾರೆ.
ತಮ್ಮ ಯೂಟ್ಯೂಬ್ ಚಾನಲ್ನಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿರುವ ಅಖ್ತರ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ಸೆಮಿಫೈನಲ್ ಹಂತಕ್ಕೆ ತಲುಪಿವೆ. ಈ ನಾಲ್ಕೂ ತಂಡಗಳು ಸೆಮಿಫೈನಲ್ ತಲುಪಲು ಅರ್ಹತೆ ಹೊಂದಿವೆ.