ಧರ್ಮಶಾಲಾ, ಹಿಮಾಚಲ ಪ್ರದೇಶ:ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಇವೆಂಟ್ನಲ್ಲಿ ಇಂದು ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಧರ್ಮಶಾಲಾದಲ್ಲಿ ಪಂದ್ಯ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಟಾಸ್ ಬಳಿಕ ಆಟ ಆರಂಭವಾಗಲಿದೆ. ಇದಕ್ಕೂ ಮೊದಲು ಅಕ್ಟೋಬರ್ 7 ರಂದು ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಪಂದ್ಯ ನಡೆದಿತ್ತು. ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶ ಭರ್ಜರಿ ಗೆಲುವು ಸಾಧಿಸಿತ್ತು.
ಧರ್ಮಶಾಲಾದಲ್ಲಿ ಇಂದಿನ ಪಂದ್ಯಕ್ಕೂ ಮುನ್ನ ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ತಂಡಗಳು ಕಳೆದ ಕೆಲವು ದಿನಗಳಿಂದ ವ್ಯಾಪಕ ಅಭ್ಯಾಸ ನಡೆಸಿವೆ. ಅಕ್ಟೋಬರ್ 5 ರಂದು ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ 9 ವಿಕೆಟ್‌ಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿತು. ಅಕ್ಟೋಬರ್ 7 ರಂದು ಧರ್ಮಶಾಲಾದಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಬಾಂಗ್ಲಾದೇಶ ತಂಡವು ವಿಶ್ವಕಪ್‌ನಲ್ಲಿ ಉತ್ತಮ ಆರಂಭ ಕಂಡುಕೊಂಡಿದೆ. ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಮೊದಲ ಗೆಲುವು ಸಾಧಿಸಲು ಸಜ್ಜಾಗಿದ್ದು, ಬಾಂಗ್ಲಾದೇಶಕ್ಕೆ ಪೈಪೋಟಿ ನೀಡಲು ಇಂಗ್ಲೆಂಡ್ ಮೈದಾನಕ್ಕಿಳಿಯಲಿದೆ. ಬಾಂಗ್ಲಾದೇಶ ತಂಡ ಎರಡನೇ ಗೆಲುವು ಸಾಧಿಸಲು ಮೈದಾನದಲ್ಲಿ ಬೆವರು ಹರಿಸುತ್ತಿರುವ ದೃಶ್ಯ ಕಂಡುಬಂತು.
ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್, ಐಪಿಎಲ್ ಪಂದ್ಯಗಳ ವೇಳೆ ತಮ್ಮ ತಂಡದ ಹಲವು ಆಟಗಾರರು ಧರ್ಮಶಾಲಾ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಡಿದ್ದಾರೆ. ಇದರಿಂದಾಗಿ ಈ ಆಟಗಾರರ ಅನುಭವದಿಂದ ತಂಡಕ್ಕೆ ಲಾಭವಾಗಲಿದೆ. ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಪ್ರದರ್ಶನ ಶ್ಲಾಘಿಸಿದರು. ಬಾಂಗ್ಲಾದೇಶ ಕ್ರಿಕೆಟ್ ತಂಡ ಕೂಡ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದರು.