ಹೈದರಾಬಾದ್: ಇಂದಿನಿಂದ ಕ್ರಿಕೆಟ್ ವಿಶ್ವಕಪ್ ಹಬ್ಬ ಪ್ರಾರಂಭಗೊಳ್ಳಲ್ಲಿದೆ. ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯಲಿದೆ. ಅಕ್ಟೋಬರ್ 8 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಪಂದ್ಯ ನಡೆಯಲಿದೆ. ಈ ಮೂಲಕ ಭಾರತ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.
ಎಲ್ಲಾ ತಂಡಗಳು ಟ್ರೋಫಿ ಎತ್ತಿಹಿಡಿಯುವ ಉದ್ದೇಶದಿಂದಲೇ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿವೆ. ಪಂದ್ಯದಲ್ಲಿ ಬ್ಯಾಟರ್‌ಗಳು ಮತ್ತು ಬೌಲರ್‌ಗಳ ಜೊತೆಗೆ ಫೀಲ್ಡರ್‌ಗಳು ಕೂಡ ಪ್ರಮುಖ ಪಾತ್ರ ವಹಿಸುತ್ತಾರೆ. ಇಂದು ನಾವು ಪ್ರತಿಷ್ಠಿತ ಟೂರ್ನಿಯ ಇತಿಹಾಸದಲ್ಲಿ ಅಗ್ರ ಐದು ಫೀಲ್ಡರ್‌ಗಳ ಬಗ್ಗೆ ಹೇಳುತ್ತಿದ್ದೇವೆ. ಆ ಐದು ಫೀಲ್ಡರ್‌ಗಳ ವಿವರ ಇಂತಿದೆ.
ರಿಕಿ ಪಾಂಟಿಂಗ್:ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅಗ್ರ ಐದು ಫೀಲ್ಡರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಹೆಸರು ಮುಂಚೂಣಿಯಲ್ಲಿದೆ. ಪಾಂಟಿಂಗ್ ಅವರು 1996 ಮತ್ತು 2011ರ ನಡುವಿನ ವಿಶ್ವಕಪ್‌ನಲ್ಲಿ ಒಟ್ಟು 46 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಒಟ್ಟು 28 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಒಂದೇ ಪಂದ್ಯದಲ್ಲಿ ಮೂರು ಕ್ಯಾಚ್‌ಗಳನ್ನು ಪಡೆದಿರುವುದು ಗರಿಷ್ಠವಾಗಿದೆ. ಕ್ಯಾಚ್‌ಗಳ ಸರಾಸರಿ 0.608 ಆಗಿದೆ.
ಜೋ ರೂಟ್:ವಿಶ್ವಕಪ್‌ನ ಟಾಪ್ 5 ಫೀಲ್ಡರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ಆಟಗಾರ ಜೋ ರೂಟ್ ಹೆಸರು ಎರಡನೇ ಸ್ಥಾನದಲ್ಲಿದೆ. ರೂಟ್ 2015 ಮತ್ತು 2019ರ ಎರಡು ಏಕದಿನ ವಿಶ್ವಕಪ್‌ಗಳನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 17 ಪಂದ್ಯಗಳನ್ನು ಆಡಿರುವ ಅವರು 20 ಕ್ಯಾಚ್ ಪಡೆದುಕೊಂಡಿದ್ದಾರೆ. ರೂಟ್ ಪಂದ್ಯವೊಂದರಲ್ಲಿ ಗರಿಷ್ಠ ಮೂರು ಕ್ಯಾಚ್‌ಗಳನ್ನು ಪಡೆದಿದ್ದಾರೆ. ಕ್ಯಾಚ್‌ಗಳ ಸರಾಸರಿ 1.176 ಆಗಿದೆ