ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತ ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ.
ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ದೆಹಲಿಗೆ ರೆಫರ್ ಮಾಡಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಖಾನ್‌ಪುರ ಶಾಸಕ ಉಮೇಶ್ ಕುಮಾರ್, ಪಂತ್ ಅವರ ಆರೋಗ್ಯ ಸ್ಥಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು.
ಕಾಲಿಗೆ ಗಂಭೀರ ಗಾಯ: ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರೇಲಿಂಗ್‌ಗೆ ಕಾರು ಡಿಕ್ಕಿಯಾಗಿ ಅಪಘಾತ: ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ತಿಳಿದು ಬಂದಿದೆ. ಅದೇ ಸಮಯದಲ್ಲಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಿಷಭ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದೆಹಲಿಯಿಂದ ರೂರ್ಕಿ ಕಡೆಗೆ ಬರುತ್ತಿದ್ದ ರಿಷಭ್: ಶುಕ್ರವಾರ ಬೆಳಗ್ಗೆ ಭಾರತದ ಕ್ರಿಕೆಟಿಗ ರಿಷಭ್ ಪಂತ್ ದೆಹಲಿಯಿಂದ ರೂರ್ಕಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಪಂತ್ ಅವರ ಮನೆ ರೂರ್ಕಿಯಲ್ಲಿದೆ. ಅವರು ನವದೆಹಲಿಯಿಂದ ನರ್ಸನ್ ಪಟ್ಟಣ ತಲುಪಿದಾಗ ಅವರು ಚಲಿಸುತ್ತಿದ್ದ ಕಾರುು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರೇಲಿಂಗ್ ಮತ್ತು ಪಿಲ್ಲರ್‌ಗಳು ಮುರಿದಿವೆ ಎಂದು ತಿಳಿದು ಬಂದಿದೆ.
ರಿಷಭ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು:ಕಾರು ಡಿವೈಡರ್ಗೆ ಡಿಕ್ಕಿ ಹೊಡೆದೆ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಷ್ಟರಲ್ಲೇ ಗ್ರಾಮಸ್ಥರು ಹಾಗೂ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದರು. ಅಪಘಾತವಾದ ತಕ್ಷಣ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದೆ. ತಕ್ಷಣವೇ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ತಾಯಿಯ ಅಂತಿಮ ದರ್ಶನ ಪಡೆದ ಪ್ರಧಾನಿ.. ಅಮ್ಮನ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಮೋದಿ!