ಅಬುಧಾಬಿ :ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ನಲ್ಲಿ 200 ಪಂದ್ಯಗಳನ್ನ ಮುನ್ನಡೆಸಿದ ಮೊದಲ ನಾಯಕ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಮುನ್ನಡೆಸುವ ಮೂಲಕ ಧೋನಿ ಈ ವಿಶೇಷ ಮೈಲುಗಲ್ಲನ್ನು ಸ್ಥಾಪಿಸಿದರು. ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 186 ಪಂದ್ಯಗಳಲ್ಲಿ ಮುನ್ನಡೆಸಿದ್ದರೆ, ರೈಸಿಂಗ್ ಪುಣೆ ಸೂಪರ್ಜೇಂಟ್ಸ್ ತಂಡವನ್ನು 14 ಪಂದ್ಯಗಳಲ್ಲಿ ಮುನ್ನಡೆಸಿದ್ದರು.
ಐಪಿಎಲ್ನಲ್ಲಿ ಅತ್ಯಂತ ಯಶಸ್ವಿ ನಾಯಕ ಎನಿಸಿರುವ ಧೋನಿ 3 ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ಇವರ ನಾಯಕತ್ವದಲ್ಲಿ ಸಿಎಸ್ಕೆ 12 ಆವೃತ್ತಿಗಳಲ್ಲಿ ದಾಖಲೆಯ 11 ಬಾರಿ ಪ್ಲೇ ಆಫ್ ತಲುಪಿದೆ. ಅಲ್ಲದೆ 2021ರ ಆವೃತ್ತಿಯಲ್ಲೂ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿದೆ.