ಬರ್ಮಿಂಗ್ಹ್ಯಾಮ್:ಕೇವಲ 49ರನ್ಗಳಿಕೆ ಮಾಡುವಷ್ಟರಲ್ಲಿ ಆಸ್ಟ್ರೇಲಿಯಾದ ನಾಲ್ಕು ವಿಕೆಟ್ ಪಡೆದುಕೊಂಡಿದ್ದ ಭಾರತ, ತದನಂತರ ಮಾಡಿರುವ ತಪ್ಪಿನಿಂದ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಕಾಮನ್ವೆಲ್ತ್ ಗೆಮ್ಸ್ನಲ್ಲಿ ಸೋಲಿನೊಂದಿಗೆ ತನ್ನ ಅಭಿಯಾನ ಆರಂಭಿಸಿದೆ. ಉಭಯ ತಂಡಗಳ ಮಧ್ಯೆ ನಡೆದ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್ಗಳ ಭರ್ಜರಿ ಗೆಲುವು ದಾಖಲು ಮಾಡಿ ಶುಭಾರಂಭ ಮಾಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಹರ್ಮನ್ಪ್ರೀತ್ ಬಳಗ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ನಷ್ಟಕ್ಕೆ 154ರನ್ಗಳಿಕೆ ಮಾಡಿತು. ಇದರ ಬೆನ್ನತ್ತಿದ ಕಾಂಗರೂ ಪಡೆ 19 ಓವರ್ಗಳಲ್ಲಿ 7 ವಿಕೆಟ್ನಷ್ಟಕ್ಕೆ 157ರನ್ಗಳಿಸಿ, ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಬ್ಯಾಟರ್ ಶೆಫಾಲಿ ವರ್ಮ ಹಾಗೂ ನಾಯಕಿ ಹರ್ಮನ್ಪ್ರೀತ್ ಕೌರ್ ಉತ್ತಮ ಆಟ ಪ್ರದರ್ಶಿಸಿದರು. ಆದರೆ, ಉಳಿದಂತೆ ಯಾವುದೇ ಆಟಗಾರರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬರಲಿಲ್ಲ. ಶೆಫಾಲಿ ಜೊತೆ ಇನ್ನಿಂಗ್ಸ್ ರಂಭಿಸಿದ ಬ್ಯಾಟರ್ ಸ್ಮೃತಿ ಮಂದಾನ(24ರನ್)ಗಳಿಸಿ ವಿಕೆಟ್ ಒಪ್ಪಿಸಿದರು.