ಮೆಲ್ಬೋರ್ನ್ :ನ್ಯೂಜಿಲ್ಯಾಂಡ್ ತಂಡದ ಮಾಜಿ ಕ್ಯಾಪ್ಟನ್ ಡೇನಿಯಲ್ ವೆಟ್ಟೋರಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಂಡಳಿ ಮಣೆ ಹಾಕಿದ್ದು, ಪುರುಷರ ತಂಡದ ಸಹಾಯಕ ಕೋಚ್ ಆಗಿ ನೇಮಕ ಮಾಡಿಕೊಂಡಿದೆ. ಮುಂಬರುವ ಟಿ-20 ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಆಸ್ಟ್ರೇಲಿಯಾ ಈ ಮಹತ್ವದ ನಿರ್ಧಾರಕ್ಕೆ ಕೈ ಹಾಕಿದೆ. ಮುಖ್ಯ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ಜೊತೆ ಸೇರಿಕೊಂಡು ವೆಟ್ಟೋರಿ ಕಾರ್ಯ ನಿರ್ವಹಿಸಲಿದ್ದಾರೆ.
ನ್ಯೂಜಿಲ್ಯಾಂಡ್ ತಂಡದ ಮಾಜಿ ಕ್ಯಾಪ್ಟನ್, ಆಲ್ರೌಂಡರ್ ಡೇನಿಯಲ್ ವೆಟ್ಟೋರಿ 18 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದಾರೆ. ಈ ಸುದೀರ್ಘ ವೃತ್ತಿ ಜೀವನದಲ್ಲಿ 113 ಟೆಸ್ಟ್, 295 ಏಕದಿನ ಪಂದ್ಯಗಳನ್ನಾಡಿದ್ದು, ಅತಿ ಹೆಚ್ಚಿನ ಅನುಭವ ಹೊಂದಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾ ತಂಡದೊಂದಿಗೆ ವೆಟ್ಟೋರಿ ಕೆಲಸ ಮಾಡಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ತಂಡ ಪಾಕಿಸ್ತಾನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ತಂಡದೊಂದಿಗೆ ಇದ್ದರು.