ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಸ್ಟ್ರೇಲಿಯಾ ಬ್ಯಾಟರ್ ಡೇವಿಡ್ ವಾರ್ನರ್ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧ ಅಜೇಯ 60 ರನ್ಗಳಿಸುವ ಮೂಲಕ 9 ವಿಕೆಟ್ಗಳ ಸುಲಭ ಜಯ ಸಾಧಿಸಲು ನೆರವಾಗಿದ್ದರು. ಪಂದ್ಯಾರಂಭಕ್ಕೆ ಕೆಲವೇ ಗಂಟೆಗಳಿರುವಾಗ ತಂಡದ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೀಫರ್ಟ್ ಕೋವಿಡ್ ಪಾಸಿಟಿವ್ ಪಡೆದಿದ್ದರಿಂದ ಕೇವಲ ನಿಮಿಷಗಳಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ಮೈದಾನಕ್ಕೆ ಆಗಮಿಸಿತ್ತು. ಆದರೆ ಒಗ್ಗಟ್ಟಿನ ಪ್ರದರ್ಶನ ನೀಡುವ ಮೂಲಕ ಪಂಜಾಬ್ ತಂಡವನ್ನು 115ಕ್ಕೆ ಕಟ್ಟಿಹಾಕಿದ್ದಲ್ಲದೆ, ಕೇವಲ 10.3 ಓವರ್ಗಳಲ್ಲಿ ಗುರಿ ತಲುಪಿತ್ತು.
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್ ಕೇವಲ 30 ಎಸೆತಗಳಲ್ಲಿ 10 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 60 ರನ್ಗಳಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ಧ 1000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.