ಹೈದರಾಬಾದ್:ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಕಳಪೆ ಪ್ರದರ್ಶನ ನೀಡಿ, ಇನ್ನಿಲ್ಲದ ಟೀಕೆಗೊಳಗಾಯಿತು. ಅದೇ ಕಾರಣಕ್ಕಾಗಿ ಡೇವಿಡ್ ವಾರ್ನರ್ ತಮ್ಮ ನಾಯಕತ್ವ ಸ್ಥಾನ ಬಿಟ್ಟುಕೊಡಬೇಕಾದ ಪರಿಸ್ಥಿತಿ ಸಹ ನಿರ್ಮಾಣಗೊಂಡಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಟೀಂ ಇಂಡಿಯಾ ಮಾಜಿ ಪ್ಲೇಯರ್ ಇರ್ಫಾನ್ ಪಠಾಣ್ ಮಾತನಾಡಿದ್ದಾರೆ. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಕಳಪೆ ಆಟಕ್ಕೆ ಡೇವಿಡ್ ವಾರ್ನರ್ ಅವರ ನಾಯಕತ್ವ ಮುಖ್ಯ ಕಾರಣವಾಗಿದೆ ಎಂದಿದ್ದಾರೆ. ಪಂದ್ಯದ ವೇಳೆ ಹಾಗೂ ಮುಕ್ತಾಯದ ನಂತರ ತಂಡದ ಪ್ಲೇಯರ್ಸ್ಗಳಲ್ಲಿ ಯಾವುದೇ ರೀತಿಯ ಸ್ಪೂರ್ತಿದಾಯಕ ಮಾತುಗಳನ್ನಾಡದೇ ಇರುತ್ತಿದ್ದರು ಎಂದು ಪಠಾಣ್ ತಿಳಿಸಿದ್ದಾರೆ.