ಅಹಮದಾಬಾದ್: ಸ್ಪಿನ್ನರ್ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 154 ರನ್ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆರಂಭಿಕ ಬ್ಯಾಟ್ಸ್ಮನ್ ನಿತೀಶ್ ರಾಣಾ 15 ರನ್ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಮತ್ತೆ ವೈಫಲ್ಯ ಅನುಭವಿಸಿದರು.
ನಂತರ ಬಂದ ಉತ್ತಮ ಫಾರ್ಮ್ನಲ್ಲಿದ್ದ ತ್ರಿಪಾಠಿ ಇಂದು ಡೆಲ್ಲಿ ಬೌಲರ್ಗಳ ಮುಂದೆ ಮಂಕಾದರು, ಅವರು ಕೇವಲ 19 ರನ್ಗಳಿಸಿ ಸ್ಟೋಯ್ನಿಸ್ಗೆ ವಿಕೆಟ್ ಒಪ್ಪಿಸಿದರು. ನಾಯಕ ಇಯಾನ್ ಮಾರ್ಗನ್ ಮತ್ತು ಆಲ್ರೌಂಡರ್ ಸುನೀಲ್ ನರೈನ್ ಖಾತೆ ತೆರೆಯದೇ ಲಲಿಯ್ ಯಾದವ್ರ ಒಂದೇ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಕಾರ್ತಿಕ್ ಆಟ ಕೂಡ 14 ರನ್ಗಳಿಗೆ ಸೀಮಿತವಾಯಿತು.
ಒಂದು ಹಂತದಲ್ಲಿ ಕೆಕೆಆರ್ 109ಕ್ಕೆ 6 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಖುಷಿಯುವ ಭೀತಿಯಲ್ಲಿತ್ತು. ಆದರೆ ಕೊನೆಯ 2 ಓವರ್ನಲ್ಲಿ ಅಬ್ಬರಿಸಿದ ರಸೆಲ್ 27 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ಗಳ ಸಹಿತ ಅಜೇಯ 47 ರನ್ಗಳಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಲಲಿತ್ ಯಾದವ್ 3 ಓವರ್ಗಳಲ್ಲಿ 13 ರನ್ ನೀಡಿ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 32 ರನ್ ನೀಡಿ 2 ವಿಕೆಟ್ ಪಡೆದರು. ಆವೇಶ್ ಖಾನ್ ಮತ್ತು ಸ್ಟೋಯ್ನಿಸ್ ತಲಾ ಒಂದು ವಿಕೆಟ್ ಪಡೆದರು. ಆದರೆ ಕೊನೆಯಲ್ಲಿ ಆ್ಯಂಡ್ರೆ ರಸೆಲ್ ಕೇವಲ 27 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 45ನ ರನ್ಗಳಿಸಿ ತಂಡದ ಮೊತ್ತವನ್ನು 150ರ ಗಡಿದಾಟಿಸಿದರು.