ಮುಂಬೈ: ಆಲ್ರೌಂಡ್ ಪ್ರದರ್ಶನ ತೋರಿದ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರನ್ಗಳ ಪ್ರಾಬಲ್ಯಯುತ ಜಯ ಸಾಧಿಸಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪೃಥ್ವಿ ಶಾ 51(29 ಎಸೆತ), ಡೇವಿಡ್ ವಾರ್ನರ್ 61(45 ಎಸೆತ) ಮತ್ತು ಶಾರ್ದೂಲ್ ಠಾಕೂರ್ 29(11 ಎಸೆತ) ರನ್ಗಳ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 215 ರನ್ಗಳಿಸಿತ್ತು.
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ 19.4 ಓವರ್ಗಳಲ್ಲಿ 171 ರನ್ಗಳಿಗೆ ಆಲೌಟ್ ಆಗುವ ಮೂಲಕ 44 ರನ್ಗಳ ಹೀನಾಯ ಸೋಲು ಕಂಡಿತು. ರಹಾನೆ(8) ಮತ್ತು ವೆಂಕಟೇಶ್ ಅಯ್ಯರ್(18) ಬೃಹತ್ ಮೊತ್ತದ ಚೇಸಿಂಗ್ ಒತ್ತಡದಲ್ಲಿ ವಿಕೆಟ್ ಒಪ್ಪಿಸಿದರು. ನಂತರ ನಾಯಕ ಶ್ರೇಯಸ್ ಅಯ್ಯರ್ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 54 ರನ್ ಸಿಡಿಸಿ ನಿತೀಶ್ ರಾಣಾ (30) ಜೊತೆಗೆ 3ನೇ ವಿಕೆಟ್‌ಗೆ 69 ರನ್ಗಳ ಜೊತೆಯಾಟ ನೀಡಿದರು.