ನವದೆಹಲಿ:ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಮಿನಿ ಹರಾಜಿನ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡ ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಇಂದು ಬಹಿರಂಗಪಡಿಸಿದೆ.
ದೆಹಲಿ ಮೂಲದ ಫ್ರಾಂಚೈಸಿ ಆರು ವಿದೇಶಿ ಆಟಗಾರರನ್ನು ಒಳಗೊಂಡಂತೆ ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಭಾರತೀಯ ಆಟಗಾರರಾದ ರಿಷಭ್ ಪಂತ್, ಪೃಥ್ವಿ ಶಾ, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಜೊತೆಗೆ ರಿಪಾಲ್ ಪಟೇಲ್, ಸರ್ಫರಾಜ್ ಖಾನ್, ಯಶ್ ಧುಲ್, ಕಮಲೇಶ್ ನಾಗರಕೋಟಿ, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್ ಮತ್ತು ಲಲಿತ್ ಯಾದವ್ ಸೇರಿ 19 ಜನರಿದ್ದಾರೆ.
ಆಸ್ಟ್ರೇಲಿಯಾದ ಬ್ಯಾಟರ್ ಡೇವಿಡ್ ವಾರ್ನರ್, ವೆಸ್ಟ್ ಇಂಡೀಸ್ ಬ್ಯಾಟರ್ ರೋವ್‌ಮನ್ ಪೊವೆಲ್, ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ಗಳಾದ ಅನ್ರಿಚ್ ನಾರ್ಟ್ಜೆ ಮತ್ತು ಲುಂಗಿ ಎನ್‌ಗಿಡಿ, ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಸೇರಿದಂತೆ ಆರು ವಿದೇಶಿ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರ ಪೈಕಿ ಒಬ್ಬರಾದ ಪ್ರವೀಣ್ ದುಬೆ ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ. ಕರ್ನಾಟಕ ಕ್ರಿಕೆಟ್ ತಂಡ ಮತ್ತು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಪ್ರತಿನಿಧಿಸುವ ಪ್ರವೀಣ್ ದುಬೆ ಬಲಗೈ ಬ್ಯಾಟ್ಸ್‌ಮನ್ ಮತ್ತು ಲೆಗ್ ಬ್ರೇಕ್ ಗೂಗ್ಲಿ ಬೌಲರ್ ಆಗಿದ್ದಾರೆ. 2016 ಮತ್ತು 2017ರಲ್ಲಿ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪಾಲಾಗಿದ್ದರು. 2020ರಲ್ಲಿ ಗಾಯಾಳು ಅಮಿತ್ ಮಿಶ್ರಾ ಬದಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರವೀಣ್ ದುಬೆ ಸೇರಿದ್ದರು.
ಇದನ್ನೂ ಓದಿ:ಮುಂಬೈ ತಂಡದ ಆಲ್‌ರೌಂಡರ್ ಕಿರಾನ್ ಪೊಲ್ಲಾರ್ಡ್ ಐಪಿಎಲ್ಗೆ ಗುಡ್ಬೈ