ಮುಂಬೈ:ಡಬಲ್ ರೌಂಡ್ ರಾಬಿನ್ ಸುತ್ತಿನ ಮೊದಲ ಸುತ್ತು ಮುಕ್ತಾಯವಾಗಲಿದೆ. ವುಮೆನ್ಸ್ ಪ್ರಿಮಿಯರ್ ಲೀಗ್ನ 10 ಪಂದ್ಯಗಳು ಮುಕ್ತಾಯವಾಗಿದೆ. 11ನೇ ಪಂದ್ಯದಲ್ಲಿ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾದ ಆರ್‌ಸಿಬಿ ಮತ್ತು ಡೆಲ್ಲಿ ಇಂದು ಮತ್ತೆ ಸೆಣಸಾಡಲಿದೆ. ಬೆಂಗಳೂರು ಮೊದಲ ಗೆಲುವಿನ ಎದುರು ನೋಡುತ್ತಿದೆ. ಟಾಸ್ ಗೆದ್ದ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ತಂಡ:ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್(ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ತಂಡ:ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್
ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂದು ಎರಡನೇ ಬಾರಿಗೆ ಮೆಗ್ ಲ್ಯಾನಿಂಗ್ ಅವರ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ಸೆಣಸಲಿದೆ. ಇದು ಆರ್‌ಸಿಬಿಯ ಐದನೇ ಪಂದ್ಯವಾಗಿದ್ದು, ಸ್ಮೃತಿ ಮಂಧಾನ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದರಲ್ಲಿ ಸೋತಿದೆ. ಇವರಿಬ್ಬರ ನಡುವಿನ ಮೊದಲ ಪಂದ್ಯ ಮಾರ್ಚ್ 5 ರಂದು ನಡೆದಿದ್ದು, ಇದರಲ್ಲಿ ಡೆಲ್ಲಿ ಕ್ಯಾಪಿಟ್ಸಲ್ಸ್ 60 ರನ್‌ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್ನು ಸೋಲಿಸಿತ್ತು.