ದುಬೈ: ಐಸಿಸಿ ಏಕದಿನ ಶ್ರೇಯಾಂಕ ರಿಲೀಸ್ ಆಗಿದ್ದು, ನೂತನ ಪಟ್ಟಿ ಪ್ರಕಾರ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಒಂದೊಂದು ಸ್ಥಾನ ಕುಸಿತ ಕಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್ 13ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.
ಪಾಕಿಸ್ತಾನದ ಕ್ಯಾಪ್ಟನ್ ಬಾಬರ್ ಆಜಂ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ರೋಹಿತ್ ಹಾಗೂ ವಿರಾಟ್ ತಲಾ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಿಖರ್ ಧವನ್ 13ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಇದರ ಜೊತೆಗೆ ಶ್ರೇಯಸ್ ಅಯ್ಯರ್ 6 ಸ್ಥಾನ ಏರಿಕೆ ಕಂಡಿದ್ದು, 54ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಟಾಪ್ 10ರಲ್ಲಿ ಕಾಣಿಸಿಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.