ದುಬೈ: ಐಸಿಸಿ ಟಿ-20 ವಿಶ್ವಕಪ್ಗೋಸ್ಕರ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ ಆಡಿರುವ ಎರಡು ಅಭ್ಯಾಸ ಪಂದ್ಯಗಳಲ್ಲಿ ಗೆಲುವು ದಾಖಲು ಮಾಡಿಕೊಳ್ಳುವ ಮೂಲಕ ಹೋರಾಟಕ್ಕೆ ಸಜ್ಜಾಗಿದೆ. ಇದರ ಮಧ್ಯೆ ಟೀಂ ಇಂಡಿಯಾ ಮಾರ್ಗದರ್ಶಕರಾಗಿ ತಂಡ ಸೇರಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಕೆಲವೊಂದು ಮಹತ್ವದ ಸಲಹೆಗಳನ್ನು ನೀಡುತ್ತಿದ್ದಾರೆ.
ಟೀಂ ಇಂಡಿಯಾ ಕಂಡಿರುವ ಅತ್ಯಂತ ಯಶಸ್ವಿ ನಾಯಕ ಹಾಗೂ ವಿಕೆಟ್ ಕೀಪರ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಸದ್ಯ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ರಿಷಭ್ ಪಂತ್ಗೆ ವಿಕೆಟ್ ಕೀಪಿಂಗ್ ಸಲಹೆ ನೀಡಿದ್ದಾರೆ.