ಮುಂಬೈ:ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಘೋಷಿಸಿರುವ ಭಾರತ ತಂಡಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕನನ್ನಾಗಿ ನೇಮಕ ಮಾಡಿರುವುದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಬಾ ಕರೀಮ್ ಹೇಳಿದ್ದಾರೆ.
ಶುಕ್ರವಾರ ಚೇತನ್ ಶರ್ಮಾ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ 18 ಸದಸ್ಯರ ತಂಡವನ್ನು ಘೋಷಿಸಿದ್ದು, ಇದಕ್ಕೆ ಕೆ ಎಲ್ ರಾಹುಲ್ರನ್ನು ನಾಯಕ ಮತ್ತು ಜಸ್ಪ್ರೀತ್ ಬುಮ್ರಾರನ್ನು ಉಪನಾಯಕನನ್ನಾಗಿ ನೇಮಕ ಮಾಡಿದೆ. ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಳ್ಳದ ಕಾರಣ ರಾಹುಲ್ಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ.
ಐಪಿಎಲ್ನಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಅಂತಹ ಆಟಗಾರರಿರುವಾಗ ಯಾವುದೇ ನಾಯಕತ್ವದ ಅನುಭವವಿಲ್ಲದ ಬುಮ್ರಾರನ್ನು ರಾಹುಲ್ಗೆ ಉಪ ನಾಯಕನಾಗಿ ಆಯ್ಕೆ ಮಾಡಲಾಗಿತ್ತು.
ಇದರ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದ ಚೇತನ್ ಶರ್ಮಾ, ಬುಮ್ರಾ ಲೀಡರ್ಶಿಪ್ ಗ್ರೂಪ್ನ ಭಾಗವಾಗಿರುವುದರಿಂದ ಅವರಿಗೆ ಈ ಅವಕಾಶ ನೀಡಲಾಗಿದೆ. ಭವಿಷ್ಯದಲ್ಲಿ ಮುಂದಾಳತ್ವ ವಹಿಸಿಕೊಳ್ಳಲು ಸಾಧ್ಯವಾದಷ್ಟನ್ನು ಕಲಿಯಲು ಬುಮ್ರಾಗೆ ಉಪನಾಯಕನ ಪಟ್ಟ ನೀಡಲಾಗಿದೆ ಎಂದು ತಿಳಿಸಿದ್ದರು.