ಮುಂಬೈ :ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ತಂಡದ ಮುಖ್ಯ ಕೋಚ್ ಆಗಿರುವ ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತ ಸೀನಿಯರ್ ತಂಡದ ಮುಖ್ಯ ಕೋಚ್ ಆಗಲು ಯಾರ ಮುಂದೆಯೂ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲ ಎಂದು ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾನುವಾರ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಯುವ ಪಡೆದ ಅತಿಥೇಯ ತಂಡದ ವಿರುದ್ಧ ಎಲ್ಲಾ ವಿಭಾಗದಲ್ಲೂ ಪ್ರಾಬಲ್ಯ ಸಾಧಿಸಿತು. ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ನಾಯಕನಾಗಿದ್ದರೆ, ಕನ್ನಡಿಗ ದ್ರಾವಿಡ್ ಮುಖ್ಯ ಕೋಚ್ ಆಗಿದ್ದಾರೆ.
ಪ್ರಸ್ತುತ ಭಾರತ ತಂಡದ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವರ ಅವಧಿ ಮುಂದಿನ ಟಿ20 ವಿಶ್ವಕಪ್ ಅಂತ್ಯಕ್ಕೆ ಮುಗಿಯಲಿದೆ. ಹಾಗಾಗಿ, ರಾಹುಲ್ ದ್ರಾವಿಡ್ ಅವರು ರವಿಶಾಸ್ತ್ರಿಯವರಿಂದ ತೆರವಾಗುವ ಸ್ಥಾನ ತುಂಬುತ್ತಾರೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.